ಪ್ರತಿನಿಧಿ ವರದಿ ಗುಂಡ್ಲುಪೇಟೆ
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸ್ವೀಪ್ ಸಮಿತಿ ವತಿಯಿಂದ ತಾಲೂಕಿನ ಮತಗಟ್ಟೆ ಅಧಿಕಾರಿಗಳಿಗೆ ಶುಕ್ರವಾರ ಪಟ್ಟಣದ ಕೆ.ಎಸ್. ನಾಗರತ್ನಮ್ಮ ಪ್ರೌಢ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಸುದ್ದಿಗರೊಂದಿಗೆ ಮಾತನಾಡಿದ
ಉಪ ಚುನಾವಣಾ ಅಧಿಕಾರಿ ದಯಾನಂದ ಮಾತನಾಡಿ, ತರಬೇತಿ ಕಾರ್ಯಕ್ರಮದಲ್ಲಿ 242 ಪಿಆರ್ ಒ, 398 ಎಪಿಆರ್ ಒ ಅಧಿಕಾರಿಗಳು ಸೇರಿದಂತೆ ಸೆಕ್ಟರ್ ಅಧಿಕಾರಿ 25 ಹಾಗೂ ಮಾಸ್ಟರ್ ಟ್ರೈನಿಂಗ್ 25 ಅಧಿಕಾರಿಗಳು ಮೊದಲನೇ ಹಂತದ ಕಾರ್ಯಾಗಾರ ಭಾಗಿಯಾಗಿದ್ದು, ಗುಂಡ್ಲುಪೇಟೆ ಕ್ಷೇತ್ರದಲ್ಲಿ ಮಹಿಳಾ ಮತದಾರರು 1,09,954 ಪುರುಷ ಮತದಾರರು 1,05,346 ತೃತೀಯ ಲಿಂಗ 16 ಸೇರಿ ಒಟ್ಟು 2,15,316 ಮತದಾರರು ಇದ್ದಾರೆ. ಮೊದಲನೇ ಹಂತದ ತರಬೇತಿಯ ಸಮಯದಲ್ಲಿ, ಮಾಸ್ಟರ್ ಟ್ರೇನರ್ಗಳು ಇವಿಎಂಗಳ ಕಾರ್ಯನಿರ್ವಹಣೆಯ ಬಗ್ಗೆ ಹಾಗೂ ತಾಂತ್ರಿಕ ದೋಷ ಕಂಡು ಬಂದಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ನೀಡಲಿದ್ದಾರೆ ಎಂದರು.
ತಾಲೂಕು ತಹಸೀಲ್ದಾರ್ ಮಂಜುನಾಥ ಮಾತನಾಡಿ, ತಾಲೂಕಿನ ಒಟ್ಟು 249 ಮತಗಟ್ಟೆಗಳ ಪೈಕಿ ತಾಲೂಕಿನಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಒಟ್ಟು 3739 ಗುರುತಿಸಲಾಗಿದ್ದು, 3639 ವಿಶೇಷ ಚೇತರಿದ್ದಾರೆ. ಇವರಿಗೆ ಮತದಾನ ಮಾಡಲು ಅನುಕೂಲವಾಗುವಂತೆ 12, ಡಿ ಫಾರಂ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಕ್ಷೇತ್ರ ಭೇಟಿ ಸಂದರ್ಭದಲ್ಲಿ ಮಾಡಲಿದ್ದಾರೆ. ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಮತಗಟ್ಟೆಗಳನ್ನು ಗುರುತಿಸಿ, ಮತದಾನ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದೆಂದರು.
ತಾಲೂಕು ಪಂಚಾಯಿತಿ ಇಒ ರಾಮಲಿಂಗಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಪಿಆರ್ ಒ, ಎಪಿಆರ್ ಒ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಫೋಟೋ ಇದೆ