ಸೋಮವಾರಪೇಟೆ: ೩೫ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತರಾದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಅವರನ್ನು ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸನ್ಮಾನಿಸಿದರು.
ಒಕ್ಕಲಿಗರ ಸಮುದಾಯಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ.ಸೋಮಶೇಖರ್, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಪಿಲೀಫ್ ವಾಸ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ.ಚಂಗಪ್ಪ, ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ, ಜೂನಿಯರ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ವಿ.ಎ.ಲಾರೇನ್ಸ್, ಕಾಲೇಜು ಪ್ರಾಂಶುಪಾಲ ಬೆಳ್ಳಿಯಪ್ಪ ಅವರುಗಳು ಸನ್ಮಾನಿಸಿ, ಸುದೀರ್ಘ ಸೇವೆಯ ಬಗ್ಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ನಂದಕುಮಾರ್, ಹಂಡ್ರಂಗಿ ನಾಗರಾಜ್ ಮತ್ತಿತರರು ಇದ್ದರು.
ಚಿತ್ರ:- ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ತಿಲೋತ್ತಮೆ ನಂದಕುಮಾರ್ ಅವರನ್ನು ಸನ್ಮಾನಿಸಲಾಯಿತು. ಚಂದ್ರಕಾಂತ್, ಸೋಮಶೇಖರ್, ಪಿಲೀಫ್ ವಾಸ್, ಚಂಗಪ್ಪ, ಮುತ್ತಣ್ಣ ಇದ್ದರು.