ಮೈಸೂರು : ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಈ ವೇಳೆ ಅಮಿತ್ ಶಾಗೆ ದೇಗುಲದ ಆಡಳಿತ ಮಂಡಳಿಯಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಶಾ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಭೇಟಿ ನೀಡಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.