ಮುಖಪುಟ ಶೃಂಗೇರಿ ಶಾರದಾ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ Last updated: May 26, 2024 2:31 pm Prathinidhi News Published May 26, 2024 Share SHARE ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆ ಆಗಿದ್ದಾರೆ. ಏ. 26 ರಂದು ನಡೆದ ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನದಲ್ಲಿ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ಮತದಾನ ಮಾಡಿದರು. ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಭೇಟಿ ನೀಡಿದ್ದರು. ಖಾಸಗಿ ಕಾರ್ಯಕ್ರಮ ನಿಮಿತ್ತ ನಿರ್ಮಲಾ ಸೀತಾರಾಮನ್ ಅವರು ಕುಟುಂಬ ಸಮೇತ ಶನಿವಾರ ರಾತ್ರಿಯೇ ಶೃಂಗೇರಿಗೆ ಭೇಟಿ ನೀಡಿದ್ದರು. ಶುಕ್ರವಾರ (ಮೇ 24) ರಂದು ಶೃಂಗೇರಿ ಮಠದಲ್ಲೇ ವಾಸ್ತವ್ಯ ಹೂಡಿದ್ದರು. ಶನಿವಾರ ಬೆಳಗ್ಗೆ ಶೃಂಗೇರಿ ಶಾರದಾ ಮಠಕ್ಕೆ ತೆರಳಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು. ಬಳಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶೃಂಗೇರಿಯಲ್ಲಿ ಮಠದ ಕುರಿತು ಅಲ್ಲಿನ ಅರ್ಚಕರಿಂದ ಕನ್ನಡದಲ್ಲೇ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡರು. ತಾಯಿ ಶಾರದಾಂಬೆ ದರ್ಶನ ಪಡೆದು ಶನಿವಾರ ಸಂಜೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. Share This Article Facebook Twitter Whatsapp Whatsapp Email Leave a comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. For security, use of Google's reCAPTCHA service is required which is subject to the Google Privacy Policy and Terms of Use.I agree to these terms (required). --:-- --:-- Prathinidhi ಈ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಕೆಲಸ ಮಾಡುತ್ತಾ? ಹೌದು ಇಲ್ಲ ResultsVote Now PODCASTSearchSearch Prathinidhi Facebook