ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಹ್ರೈಚ್ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಕೋಮುಗಲಭೆಯಲ್ಲಿ ಮೃತಪಟ್ಟ ವ್ಯಕ್ತಿಯ ಸಾವು ಖಂಡಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲ ಕಿಡಿಗೇಡಿಗಳು ಆಸ್ಪತ್ರೆ, ಮನೆ ಹಾಗೂ ಅಂಗಡಿಗಳಿಗೆ ಬೆಂಕಿ ಇಟ್ಟಿದ್ದಾರೆ. ಇದರಿಂದ ಅಪಾರ ಪ್ರಮಾಣದ ಆಸ್ತಿ, ಪಾಸ್ತಿ ನಷ್ಟವಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಏಕಾಏಕಿ ನುಗ್ಗಿದ್ದ ದುಷ್ಕರ್ಮಿಗಳು ಪ್ರತಿಭಟನೆ ಹೆಸರಲ್ಲಿ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿದ್ದಾರೆ . ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು, ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ಬುಲೆಟ್ ಫೈರ್ ಆಗಿ ವ್ಯಕ್ತಿ ಮೃತಪಟ್ಟಿದ್ದರು . ಆ ಸಾವನ್ನ ಖಂಡಿಸಿ ಪ್ರತಿಭಟಜೆ ನಡೆಯುತ್ತಿದ್ದು , ಮತ್ತಷ್ಟು ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.