ಪ್ರತಿನಿಧಿ ವರದಿ ಚಾಮರಾಜನಗರ
ಚಾಮರಾಜನಗರ ನಗರಸಭೆಗೆ ಸೇರಿದ ಟಿ. ನರಸೀಪುರ ಕುಡಿಯುವ ನೀರು ಸರಬರಾಜು ಮಾಡುವ ಪಂಪ್ ಕೇಂದ್ರದಲ್ಲಿ ಮೋಟಾರ್ ಪಂಪ್ ದುರಸ್ತಿಗೊಳಗಾಗಿದ್ದು, ಈ ಸಂಬಂಧ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ 3 ದಿನಗಳವರೆಗೆ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕೆಂದು ಪೌರಾಯುಕ್ತ ಎಸ್.ವಿ.ರಾಮದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.