ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮೊದಲ ಚಿನ್ನದ ಪದಕದ ನಿರೀಕ್ಷೆಯಲ್ಲಿದ್ದ ಭಾರತದ ಕೋಟ್ಯಾಂತರ ಕ್ರೀಡಾ ಪ್ರೇಮಿಗಳಿಗೆ ಇಂದು ಆಘಾತವಾಗಿದೆ. ಪದಕವಿಲ್ಲದ ಬರಿಗೈಯಲ್ಲಿ ಭಾರತಕ್ಕೆ ವಾಪಸ್ ಆಗುವ ಅನಿವಾರ್ಯತೆ ವಿನೇಶ್ ಪೂಗಟ್ ಅವರಿಗೆ ಎದುರಾಗಿದೆ. ಕೇವಲ 100 ಗ್ರಾಂ ತೂಕ ಹೆಚ್ಚಿದ್ದ ಹಿನ್ನೆಲೆಯಲ್ಲಿ ಭಾರತದ ಕುಸ್ತಿಪಟು ವಿನೇಶ್ ಪೂಗಟ್ ಪ್ಯಾರಿಸ್ ಒಲಂಪಿಕ್ಸ್ ನಿಂದ ಹೊರ ಉಳಿದಿದ್ದಾರೆ. ಆಗಸ್ಟ್ 6ರಂದು ಒಲಂಪಕ್ಸ್ ನ ಮಹಿಳಾ 50ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಜನ್ ಲೋಪೆಜ್ ಅವರನ್ನು ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಪೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಹಿನ್ನೆಲೆಯಲ್ಲಿ ವಿನೇಶ್ ಪೋಗಟ್ ಅವರನ್ನ ಫೈನಲ್ ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ ವಿನೇಶ್ ಪೋಗಟ್ ಅವರಿಗೆ ಚೊಚ್ಚಲ ಒಲಂಪಿಕ್ಸ್ ಪದಕ ಕೈತಪ್ಪಿದಂತಾಗಿದೆ.
ಈ ನಿರ್ಧಾರದ ಬಗ್ಗೆ ಭಾರತೀಯ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿನೇಶ್ ಪೂಗಟ್ ಅವರನ್ನು ಅನರ್ಹಗೊಳಿಸಿರುವ ನಿರ್ಧಾರ ಖಂಡಿಸಿ. ‘ಎಕ್ಸ್’ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ‘Boycott’ ಪ್ಯಾರಿಸ್ ಒಲಂಪಿಕ್ಸ್ ಎಂಬ ಅಭಿಯಾನ ನಡೆಸುತ್ತಿದ್ದಾರೆ. ಹೀಗಾಗಿ ‘ಬಾಯ್ಕಟ್’ ಎಂಬುದು ಎಕ್ಸ್ ಖಾತೆಯಲ್ಲಿ ಟ್ರೆಂಡಿಂಗ್ ನಲ್ಲಿದ್ದು, ಅಸಂಖ್ಯಾತ ಕ್ರೀಡಾಭಿಮಾನಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.