ಪ್ರತಿನಿಧಿ ವರದಿ ಚಾಮರಾಜನಗರ
ಜಿಲ್ಲಾ ಕೇಂದ್ರದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ ಅಂಗಡಿಗಳ ಮೇಲೆ ನಗರಸಭೆ ಸಿಬ್ಬಂದಿ ದಾಳಿ ನಡೆಸಿ, ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲೀಕರಿಗೆ ದಂಡ ವಿಧಿಸಿದ್ದಾರೆ.
ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡದಂತೆ ಹಲವು ಬಾರಿ ಅಂಗಡಿ ಮಾಲೀಕರಿಗೆ ನಗರಸಭೆಯಿಂದ ಸೂಚನೆ ನೀಡಿ, ಕೆಲವು ಅಂಗಡಿ ಮಾಲೀಕರಿಗೆ ದಂಡವನ್ನು ಸಹ ವಿಧಿಸಲಾಗಿತ್ತು. ಆದರೂ ಪ್ಲಾಸ್ಟಿಕ್ ವಸ್ತುಗಳನ್ನು ಕದ್ದು,ಮುಚ್ಚಿ ಮಾರಾಟ ಮಾಡುತ್ತಿರುವುದು ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರದ ದೊಡ್ಡಅಂಗಡಿಬೀದಿ ಹಾಗೂ ಚಿಕ್ಕ ಅಂಗಡಿ ಬೀದಿಯಲ್ಲಿರುವ ಕೆಲವು ಅಂಗಡಿಗಳ ಮೇಲೆ ದಾಳಿ ನಡೆಸಿದರು.
ದಾಳಿ ನಡೆಸಿದ ನಗರಸಭೆ ಸಿಬ್ಬಂದಿ ಪ್ಲಾಸ್ಟಿಕ್ ವಸ್ತಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲೀಕರಿಗೆ ದಂಡ ವಿಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ವಸ್ತಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕರಾದ ಮಂಜುನಾಥ, ಪುಷ್ಪ, ಸಿಬ್ಬಂದಿಗಳಾದ ಸಂತೋಷ, ಪ್ರಸಾದ್, ರುದ್ರೇಶ್, ರೀತಿಕ್, ತನ್ವಿರ್, ಅರ್ಫಾಜ್, ರಾಜೇಂದ್ರ ಸೇರಿದಂತೆ ಇತರರು ಇದ್ದರು.
29ಸಿಎಚ್ಎನ್.3: ಚಾಮರಾಜನಗರದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ ಅಂಗಡಿಗಳ ಮೇಲೆ ನಗರಸಭೆ ಸಿಬ್ಬಂದಿ ದಾಳಿ ನಡೆಸಿ, ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡರು.