ಬೆಂಗಳೂರು : ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕಾಣಸಿಕೊಂಡಿದ್ದು, ಹವಲು ಪ್ರದೇಶಗಳ ಬೋರ್ವೆಲ್ಗಳಲ್ಲಿ ನೀರು ಬತ್ತಿ ಹೋಗಿದೆ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಆರ್.ಅಶೋಕ , ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಲ್ಲಿ ನೀರಿನ ಸಮಸ್ಯೆ ಆಗಿದೆ ಎಂದು ಆರೋಪಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡಿಯಿಂದ ನೀರಿನ ಸಮಸ್ಯೆ ಆಗಿದೆ. ಇಂತಹ ಕೆಟ್ಟ ಸರ್ಕಾರವನ್ನು ತೊಲಗಿಸಬೇಕಿದೆ. ದೇಶದಲ್ಲಿ ಮೋದಿ ಗ್ಯಾರಂಟಿ ಒಂದೇ. ಕಾಂಗ್ರೆಸ್ನ ಗ್ಯಾರಂಟಿಗಳು ನೀರಿನ ಮೇಲಿನ ಗುಳ್ಳೆಗಳಿದ್ದಂತೆ. ಸರ್ಕಾರದ ಬಳಿ ಬೋರ್ ವೆಲ್ ಕೊರಿಸುವುದಕ್ಕೂ ಹಣವಿಲ್ಲ. ನಿಮ್ಮ 2000 ರೂಪಾಯಿಯಿಂದ ಏನು ಆಗುತ್ತದೆ ಎಂದು ಗ್ಯಾರಂಟಿ ಯೋಜನೆಯನ್ನು ಟೀಕಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ವಿದೇಶ ಚಾನಲ್ನಲ್ಲಿ ಬೆಂಗಳೂರಿನ ಮರ್ಯಾದೆ ಹೋಗುತ್ತಿದೆ. ನೀರಿನ ಸಮಸ್ಯೆ ಇದೆ, ಅಲ್ಲಿ ಯಾರು ಹೋಗಬೇಡಿ ಅಂತಿದ್ದಾರೆ ಎಂದರು.