ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು: ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿಗಳು ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಬಹುದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ80 ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ. ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಸಿಎಂ ಕರೆ ನೀಡಿದರು.
ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬೆಳಗಾವಿಯಲ್ಲಿ ನೆವು ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ ಎಂದರು.
ಉತ್ತರ ಕನ್ನಡದಲ್ಲಿ ಬದಲಾವಣೆ ವಾತಾವರಣ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರ ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಉತ್ತರ ಕನ್ನಡ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನುವ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಇಲ್ಲೂ ಗೆಲುವಿನ ಅವಕಾಶಗಳು ಇವೆ ಎನ್ನುವ ಬಗ್ಗೆಯೂ ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಸೇರಿ ಮಾಜಿ ಸಚಿವರಾದ ಲಕ್ಷ್ಮಣ್ ಸವದಿ ಮತ್ತು ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40 ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಸುಗಮವಾಗಿ ನಡೆದು, ಜಿಲ್ಲೆಯ ಫಲಿತಾಂಶ ಮಟ್ಟವನ್ನು ಮೇಲು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಎಂದು ಉಪ ನಿರ್ದೇಶಕ ಎಚ್.ಕೆ. ಪಾಂಡು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ಇಲಾಖೆ ಎಲ್ಲ ಕ್ರಮ ಕೈಗೊಂಡಿದೆ. ಹೀಗಾಗಿ ಮೊದಲನೇ ದಿನ ಬೆಳಗ್ಗೆ ಒಂಭತ್ತಕ್ಕೆಲ್ಲ ಪರೀಕ್ಷಾ ಕೊಠಡಿಗೆ ಹಾಜರಾಗಿ ಆತಂಕ ದೂರ ಮಾಡಿಕೊಳ್ಳಲು ತಿಳಿಸಲಾಗಿದೆ. ಇನ್ನು, ವಿದ್ಯಾರ್ಥಿಗಳನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುವ ನಿಟ್ಟಿನಲ್ಲಿ ಎಲ್ಲರೂ ಶಾಲಾ ಸಮವಸ್ತ್ರ ಧರಿಸಿರಬೇಕು. ಮೊಬೈಲ್, ಸ್ಮಾರ್ಟ್ವಾಚ್ ಮೊದಲಾದವನ್ನು ನಿರ್ಬಂಧಿಸಲಾಗಿದೆ ಎಂದು ವಿವರಿಸಿದರು.
ನಗರದಲ್ಲಿ ೩೫, ಗ್ರಾಮೀಣ ಪ್ರದೇಶದಲ್ಲಿ ೯೭ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ೧೩೨ ಪರೀಕ್ಷಾ ಕೇಂದ್ರಗಳಿವೆ. ಇವುಗಳಲ್ಲಿ ಎಲ್ಲ ರೀತಿಯ ವಿದ್ಯಾರ್ಥಿಗಳು ಸೇರಿದಂತೆ ೪೦,೩೩೩ ಮಂದಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ ೨೦,೦೪೬ ಮಂದಿ ಪುರುಷರು, ೨೦,೨೮೭ ಮಹಿಳೆಯರು ಸೇರಿದ್ದಾರೆಂದರು.
ಮಾ. ೨೫ ರ ಸೋಮವಾರ ಬೆಳಗ್ಗೆ ೧೦.೧೫ ರಿಂದ ಮಧ್ಯಾಹ್ನ ೧.೩೦ ರವರೆಗೆ ಪ್ರಥಮ ಭಾಷೆ, ೨೭ರ ಬುಧವಾರ ಬೆಳಗ್ಗೆ ೧೦.೧೫ ರಿಂದ ಮಧ್ಯಾಹ್ನ ೧.೩೦ ರವರೆಗೆ ಸಮಾಜ ವಿಜ್ಞಾನ, ೩೦ರ ಶನಿವಾರ ಬೆಳಗ್ಗೆ ೧೦.೧೫ ರಿಂದ ಮಧ್ಯಾಹ್ನ ೧.೩೦ ರವರೆಗೆ ವಿಜ್ಞಾನ, ಏಪ್ರಿಲ್ ಎರಡರ ಮಂಗಳವಾರ ಬೆಳಗ್ಗೆ ೧೦.೧೫ ರಿಂದ ಮಧ್ಯಾಹ್ನ ೧.೩೦ರವರೆಗೆ ಗಣಿತ, ಏ.೩ರ ಬುಧವಾರ ಬೆಳಗ್ಗೆ ೧೦.೧೫ ರಿಂದ ಮಧ್ಯಾಹ್ನ ೧.೩೦ರವರೆಗೆ ಆಯ್ದ ಕೇಂದ್ರಗಳಲ್ಲಿ ಪರ್ಯಾಯ ವಿಷಯ, ಏ.೪ರ ಬೆಳಗ್ಗೆ ೧೦.೧೫ರಿಂದ ಮಧ್ಯಾಹ್ನ ೧.೧೫ ರವರೆಗೆ ತೃತೀಯ ಭಾಷೆ, ಏ.೬ರ ಶನಿವಾರ ಬೆಳಗ್ಗೆ ೧೦.೧೫ ರಿಂದ ಮಧ್ಯಾಹ್ನ ೧.೧೫ ರವರೆಗೆ ದ್ವಿತೀಯ ಭಾಷೆ ಪರೀಕ್ಷೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.