ಹೆಚ್ ಡಿ ಕೋಟೆ ತಾಲೂಕಿನ ಗೋಳೂರು ಹಾಡಿಯಲ್ಲಿ ಮನೆಯಲ್ಲಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಜರುಗಿದೆ. ದಾಳಿಗೊಳಗಾದ ಕಾಳ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.
ತಾಲೂಕಿನ ಗೋಳೂರು ಹಾಡಿಯಲ್ಲಿ ಬೆಳಗಿನ ಜಾವ ಐದು ಗಂಟೆ ಸಮಯದಲ್ಲಿ ಮನೆ ಬಳಿ ಬಂದ ಕಾಡಾನೆ ಏಕಾಏಕಿ ಮನೆ ಜಖಂಗೊಳಿಸಿದೆ. ಮನೆಯೊಳಗಿದ್ದ ಕಾಳ (75) ಚೀರಾಡಿದಾಗ, ದಂತದಿಂದ ಕಾಳನ ಗಂಟಲನ್ನು ಆನೆ ಇರಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಕಾಳನನ್ನು ಅರಣ್ಯ ಇಲಾಖೆ ಸಹಕಾರದೊಂದಿಗೆ ಹೆಚ್ ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ ಹಿನ್ನೆಲೆ, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ ಆದರೆ ಕೆಲವೇ ಕ್ಷಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಅಸುನೀಗಿದ್ದಾರೆ.
ಘಟನೆ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.