ದೆಹಲಿ ಸೆಪ್ಟೆಂಬರ್ 19: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತದ ಹೊಸ ಸಂಸತ್ನಲ್ಲಿ ನಡೆದ ಕಲಾಪದ ಮೊದಲ ದಿನವಾದ ಇಂದು (ಮಂಗಳವಾರ) ಮಹಿಳಾ ಮೀಸಲಾತಿ ಮಸೂದೆ ಮಂಡಿಸಲಾಗಿದೆ. ಇದನ್ನು ನಾರಿ ಶಕ್ತಿ ವಂದನ್ ಅಧಿನಿಯಮ್ ಎಂದು ಕರೆಯಲಾಗುವುದು. ಹೊಸ ಸಂಸತ್ ಭವನದಲ್ಲಿ ಮಾಡಿದ ತಮ್ಮ ಮೊದಲ ಭಾಷಣದಲ್ಲಿ ಪ್ರಧಾನಿ ಮೋದಿ ಮಹಿಳಾ ಮೀಸಲಾತಿ ಮಸೂದೆಯನ್ನು ಘೋಷಿಸಿದರು.ಕಳೆದ 27 ವರ್ಷಗಳಲ್ಲಿ ಹಲವಾರು ಬಾರಿ ಮಸೂದೆಯನ್ನು ಮಂಡಿಸಲಾಗಿದೆ ಆದರೆ ಪದೇ ಪದೇ ಅದಕ್ಕೆ ತಡೆಯೊಡ್ಡಲಾಗಿತ್ತು.
ಹೊಸ ಸಂಸತ್ತಿನ ಕಟ್ಟಡದಲ್ಲಿ ಮಾಡಿದ ಮೊದಲ ಭಾಷಣದಲ್ಲಿ, ಪ್ರತಿ ದೇಶದ ಇತಿಹಾಸದಲ್ಲಿ “ಮೈಲುಗಲ್ಲುಗಳು” ಎಂದು ಪರಿಗಣಿಸಲಾದ ಕೆಲವು ದಿನಗಳಿವೆ ಎಂದು ಮೋದಿ ಹೇಳಿದರು. ಇಂದು ನಾವು ಹೊಸ ಇತಿಹಾಸವನ್ನು ಸೃಷ್ಟಿಸಿದ್ದೇವೆ ಎಂದು ಹೆಮ್ಮೆಯಿಂದ ಹೇಳುವಾಗ ಪ್ರತಿಯೊಂದು ದೇಶದ ಅಭಿವೃದ್ಧಿ ಪಯಣದಲ್ಲಿ ಇಂತಹ ಮೈಲುಗಲ್ಲುಗಳು ಬರುತ್ತವೆ. ಹೊಸ ಸದನದ ಮೊದಲ ಅಧಿವೇಶನದ ಮೊದಲ ಭಾಷಣದಲ್ಲಿ, ಇಂದಿನ ಕ್ಷಣ, ಇಂದಿನ ದಿನವು ಇತಿಹಾಸದಲ್ಲಿ ದಾಖಲಾಗಲಿದೆ ಎಂದು ನಾನು ಅತ್ಯಂತ ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದ ಹೇಳುತ್ತಿದ್ದೇನೆ ಎಂದು ಅವರು ಹೇಳಿದರು.
ಅವರ ಭಾಷಣಕ್ಕೆ ಕೆಲವೇ ನಿಮಿಷಗಳ ಮೊದಲು, ಕೇಂದ್ರ ಸರ್ಕಾರವು ಸಂವಿಧಾನ (ನೂರಾ ಇಪ್ಪತ್ತೆಂಟನೇ ತಿದ್ದುಪಡಿ) ಮಸೂದೆ, 2023 ಅನ್ನು ಲೋಕಸಭೆಯಲ್ಲಿ ಮೇಘವಾಲ್ ಮಂಡಿಸಲು ಪಟ್ಟಿಮಾಡಿತು.
ನಾರಿಶಕ್ತಿ ವಂದನ್ ಅಧಿನಿಯಂ ಅನ್ನು ಪರಿಚಯಿಸುವ ಸಂದರ್ಭದಲ್ಲಿ ಪ್ರಧಾನಿಯವರು ಎಲ್ಲಾ ಶಾಸಕರಲ್ಲಿ ಒಮ್ಮತವನ್ನು ಕೇಳಿದರು. ಮಹಿಳಾ ಮೀಸಲಾತಿ ಮಸೂದೆಗೆ ದೇವರು ಅವರನ್ನು ಆಯ್ಕೆ ಮಾಡಿದ್ದಾನೆ ಎಂದು ಮೋದಿ ಹೇಳಿದ್ದಾರೆ. ಹಿಂದಿನ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಅವರಿಗೆ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗಲಿಲ್ಲ. ‘ನಾರಿ ಶಕ್ತಿ ವಂದನ್ ಅಧಿನಿಯಮ್’ ಹೆಚ್ಚಿನ ಮಹಿಳೆಯರು ಸಂಸತ್, ವಿಧಾನಸಭೆಗಳ ಸದಸ್ಯರಾಗುವುದನ್ನು ಖಚಿತಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ